ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ…

69
firstsuddi

ಸ್ಯಾಂಡಲ್​ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯ್ ಪತ್ನಿ ಸ್ಪಂದನ ಅವರು ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಪ್ಪು ನಿಧನದ ಶಾಕ್‌ನಿಂದ ಹೊರ ಬಂದಾಗಲೇ ಮತ್ತೊಂದು ಆಘಾತಕಾರಿ ವಿಚಾರ ಕುಟುಂಬಕ್ಕೆ ಶಾಕ್ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.

ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸ್ಪಂದನಾ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಅವರ ತಂದೆ ಬಿಕೆ ಶಿವರಾಮ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2007ರ ಆಗಸ್ಟ್ 26ರಂದು ವಿಜಯ್-ಸ್ಪಂದನಾ ಮದುವೆ ನಡೆಯಿತು. ಈ ದಂಪತಿಗೆ ಒಬ್ಬ ಮಗನಿದ್ದಾನೆ.

ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ.