ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ- ಐಸಿಯುವಿನಲ್ಲಿ ಚಿಕಿತ್ಸೆ…

76
firstsuddi

‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಇದೆ. ಅನಾರೋಗ್ಯದಿಂದಾಗಿ ಅವರನ್ನು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆರೋಗ್ಯ ಚಿಂತಾಜನಕ ಆಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರಿಗೆ ಡಯಾಲಿಸಿಸ್ ನೀಡಲಾಗುತ್ತಿದೆ. ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದಿದ್ದಾರೆ.

ಕೆ ಶಿವರಾಮ್ ಅವರು ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ನಿವೃತ್ತರಾದ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕೆ ಶಿವರಾಮ್, 2013 ರಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, 2016ರ ಬಳಿಕ ಬಿಜೆಪಿ ಪಕ್ಷ ಸೇರಿದ್ದರು.

ಕೆ ಶಿವರಾಮ್ ಅವರು ಬಾ ನಲ್ಲೆ ಮಧುಚಂದ್ರಿಕೆ, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು.