ಮುಂಬೈ : ನಟ ಸೋನು ಸೂದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸೋನು ಸೂದ್ ಅವರು, ವರದಿಯಲ್ಲಿ ಪಾಸಿಟಿವ್ ಕಂಡುಬಂದ ಕೂಡಲೇ ಕ್ವಾರಂಟೈನ್ ಆಗಿದ್ದೇನೆ. ಯಾರೂ ಕೂಡ ಆತಂಕಕ್ಕೊಳಗಾಗೋದು ಬೇಡ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ನನಗೀಗ ಹೆಚ್ಚಿನ ಸಮಯ ಸಿಗಲಿದೆ. ಏನೇ ಕಷ್ಟಗಳು ಇದ್ದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಅನ್ನೋದನ್ನ ಮರೆಯಬೇಡಿ ಎಂದಿದ್ದಾರೆ.
— sonu sood (@SonuSood) April 17, 2021
ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ವಲಸಿಗರು ತಮ್ಮ ರಾಜ್ಯಗಳಿಗೆ ತಲುಪಲು ಕಷ್ಟಪಡುತ್ತಿದ್ದರು. ಇಂತಹ ಸಮಯದಲ್ಲಿ ನಟ ಸೋನು ಸೂದ್ ಅವರು ವಲಸೆ ಕಾರ್ಮಿಕರ ಸಹಾಯಕ್ಕೆ ಧಾವಿಸಿದ್ದರು.










