ನನಗಿಷ್ಟವಾದ ಖಾತೆ ಹಂಚಿಕೆಯಾಗಿಲ್ಲ : ಆನಂದ್ ಸಿಂಗ್ ಅಸಮಾಧಾನ…

94
firstsuddi

ಬಳ್ಳಾರಿ : ಖಾತೆ ಹಂಚಿಕೆಯಲ್ಲಿ ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು. ನನಗಿಷ್ಟವಾದ ಖಾತೆ ಹಂಚಿಕೆಯಾಗಿಲ್ಲ ಎಂದು ಆನಂದ್ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ಖಾತೆ ಹಂಚಿಕೆ ಬಗ್ಗೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಸೋದ್ಯಮ ಖಾತೆ ಹಂಚಿಕೆ ಮಾಡಿರೋದು ನನಗಿಷ್ಟವಿಲ್ಲ. ಖಾತೆ ಹಂಚಿಕೆಯಲ್ಲಿ ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು. ನನಗೆ ಇದರ ಬಗ್ಗೆ ನೋವಿದೆ. ನಾಳೆ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಮತ್ತೊಮ್ಮೆ ಬೇಡಿಕೆ ಇಡುತ್ತೇನೆ. ನನಗೆ ಖಾತೆ ಬದಲಾವಣೆ ಮಾಡಿಕೊಡ್ತಾರೆ ಅಂತ ಮುಖ್ಯಮಂತ್ರಿಗಳ ಮೇಲೆ ಅಪಾರ ನಂಬಿಕೆ ಇದೆ ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳು, ಆನಂದ್ ಸಿಂಗ್ ನನ್ನ ಆತ್ಮೀಯ ಮಿತ್ರರು. ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.