ನನ್ನ ರಾಜೀನಾಮೆಯನ್ನು ಅಂಗೀಕರಿಸದಿದ್ದರೆ ಹುಣಸೂರು ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ : ಹೆಚ್. ವಿಶ್ವನಾಥ್…

264
firstsuddi

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಲುವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಬಳಿ ರಾಜೀನಾಮೆ ಪತ್ರವನ್ನು ನೀಡಿದ್ದರು. ಆದರೆ ದೇವೇಗೌಡ ಅವರು ರಾಜೀನಾಮೆಯನ್ನು ಅಂಗೀಕರಿಸದೇ ಇರುವುದರಿಂದ ಹೆಚ್. ವಿಶ್ವನಾಥ್ ಅವರು ಇಂದು ಸುದ್ದಿಗೋಷ್ಟಿ ನಡೆಸಿ ಮನವಿ ಮಾಡಿಕೊಂಡಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದೇ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು. ನನ್ನ ರಾಜೀನಾಮೆಯನ್ನು ಅಂಗೀಕರಿಸದಿದ್ದರೆ ಹುಣಸೂರು ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಎಚ್ಚರಿಸಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮನೆಯನ್ನು ಸ್ವೀಕರಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.