ನಮ್ಮನ್ನು ಸೋಲಿಸುವುದು, ಗೆಲ್ಲಿಸುವುದು ನಮ್ಮ ಕ್ಷೇತ್ರದ ಜನರೇ ಹೊರತು ಕುಮಾರಸ್ವಾಮಿ ಅವರಲ್ಲ : ಬಿ.ಸಿ. ಪಾಟೀಲ್.

237
firstsuddi

ಹಿರೇಕೆರೂರು : ನಮ್ಮನ್ನು ಸೋಲಿಸುವುದು ಅಥವಾ ಗೆಲ್ಲಿಸುವುದು ನಮ್ಮ ಕ್ಷೇತ್ರದ ಜನರೇ ಹೊರತು ಕುಮಾರಸ್ವಾಮಿ ಅವರಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಅವರು ಹೇಳಿದ್ದಾರೆ. ನಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ್ದು, ಮುಖ್ಯಮಂತ್ರಿಯಾಗಿ ಕೇವಲ ಅವರ ಕುಟುಂಬ ಹಾಗೂ ರಾಜ್ಯದ ಎಂಟು ಕ್ಷೇತ್ರಗಳಿಗೆ ಮಾತ್ರ ಸೀಮಿತರಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಕ್ಷೇತ್ರಗಳ ಅಭಿವೃದ್ದಿಯನ್ನು ಕಡೆಗಣಿಸಿದ್ದರು. ಹೀಗಾಗಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಉಪಚುನಾವಣೆಯಲ್ಲಿ ನಮ್ಮನ್ನು ಸೋಲಿಸುವುದು, ಗೆಲ್ಲಿಸುವುದು ನಮ್ಮ ಕ್ಷೇತ್ರದ ಜನರೇ ಹೊರತು ಕುಮಾಸ್ವಾಮಿ ಅವರಲ್ಲ. ನಮ್ಮ ಕ್ಷೇತ್ರದ ಜನರು ನಾವು ಬಿಜೆಪಿ ಪಕ್ಷ ಸೇರಿರುವುದನ್ನು ಸ್ವಾಗತಿಸಿದ್ದಾರೆ. ಈ ಬಾರಿಯೂ ಕೂಡಾ ಹೆಚ್ಚಿನ ಮತ ನೀಡಿ ನಮ್ಮನ್ನು ಆಯ್ಕೆ ಮಾಡುತ್ತಾರೆ ಎಂಬ ಭರವಸೆ ಇದೆ ಎಂದರು.