ನವದೆಹಲಿ : ಸುಪ್ರಿಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ್ ನೇಮಕ…

112
firstsuddi

ನವದೆಹಲಿ : ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಎನ್.ವಿ.ರಮಣ ಅವರನ್ನು ನೇಮಕ ಮಾಡಿದ್ದು, ಏಪ್ರೀಲ್.24 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್ .ವಿ ರಮಣ ಅವರನ್ನು ಮುಂದಿನ ಸಿಜೆಐ ಆಗಿ ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ಅವರು ಶಿಫಾರಸ್ಸು ಮಾಡಿದ್ದರು.

ಆಗಸ್ಟ್ 27, 1957 ರಂದು, ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ ಎನ್ .ವಿ ರಮಣ ಅವರು 2000ರ ಜೂನ್ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ಅದಾದ ಬಳಿಕ ಅವರು ದೆಹಲಿ ಹೈಕೋರ್ಟ್‍ನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಇದೇ ಏಪ್ರಿಲ್ 23ರಂದು ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರು ನಿವೃತ್ತಿಯಾಗುತ್ತಿದ್ದು, ಏಪ್ರಿಲ್ 24ರಿಂದ ರಮಣ ಅವರು ಸುಪ್ರಿಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.