ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಮೋದಿ.

69
firstsuddi

ನವದೆಹಲಿ : ನಾಡಿನ ಸಮಸ್ತ ಜನತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ರಾಷ್ಟ್ರೀಯ ಪ್ರಗತಿಗೆ ಅಭೂತಪೂರ್ವ ಕೊಡುಗೆಗಳನ್ನು ನೀಡುತ್ತಿರುವ ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನರ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸಲಿವೆ ಎಂದು ಹೇಳಿದ್ದಾರೆ.

ಮೋದಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ಅವರಿಗೆ ಸಂಕ್ರಾಂತಿಯ ಶುಭಾಶಯಗಳು. ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯ 18,78,671 ವಸತಿ ರಹಿತರಿಗೆ ಮತ್ತು 6,61,535 ನಿವೇಶನ ರಹಿತ ಕುಟುಂಬಗಳ ಸಿಂಕ್ರನೈಸೇಶನ್ ಗೆ ಅನುಮತಿ ನೀಡಿದ್ದಕ್ಕೆ ಧನ್ಯವಾದ. ಇದು ನಿಜವಾಗಿ ಎಲ್ಲ ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವುದರ ಜೊತೆಗೆ ಮಕರ ಸಂಕ್ರಾಂತಿಯನ್ನು ಇನ್ನಷ್ಟು ವಿಶೇಷವಾಗಿಸಿದೆ ಎಂದು ಹೇಳಿದ್ದಾರೆ.