ಬೆಂಗಳೂರು : ನಾನು ಆರೋಗ್ಯವಾಗಿದ್ದೇನೆ, ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಅಧಿಕ ರಕ್ತದೊತ್ತಡದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. “ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.











