ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ, ಯಾವುದೇ ಒತ್ತಡ ಬಂದರೂ ನಾನು ನಿಲ್ಲಲ್ಲ: ನಿಖಿಲ್ ಸ್ಪಷ್ಟನೆ…

62
firstsuddi

ಮಂಡ್ಯ: ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಯಾವುದೇ ಒತ್ತಡ ಬಂದರೂ ನಾನು ನಿಲ್ಲಲ್ಲ ಎಂದು ಮಂಡ್ಯ ಸ್ಪರ್ಧೆ ಚರ್ಚೆ ಕುರಿತು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದ ಪಾಂಡವಪುರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾಧ್ಯಮದವರ ಜೊತೆ ಮಾತನಾಡಿ, ನನ್ನ ಹಾಗೂ ಹೆಚ್​ಡಿಕೆ ಸ್ಪರ್ಧೆಗೆ ಕಾರ್ಯಕರ್ತರ, ಮುಖಂಡರ ಒತ್ತಡ ಇದೆ. ನನ್ನ ಮಾತು ಎಲ್ಲಾ ಸಮಯದಲ್ಲೂ ಒಂದೇ. ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ. ಯಾವುದೇ ಒತ್ತಡ ಬಂದರೂ ನಾನು ನಿಲ್ಲಲ್ಲ ಎಂದು ಹೇಳಿದರು.

ಸೀಟು ಹಂಚಿಕೆ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ. ಎನ್‍ಡಿಎ ಮೈತ್ರಿಕೂಟದಲ್ಲಿ ಯಾವ ರೀತಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಆಗಿದೆ. ನನ್ನ ಪ್ರವಾಸ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಲಾರ, ಹಾಸನ, ಮೈಸೂರು ಸೇರಿದಂತೆ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ನಾನು ಮಂಡ್ಯ ಅಭ್ಯರ್ಥಿ ಆಗಿದ್ದ ಕಾರಣ ಮಂಡ್ಯದಲ್ಲಿ ಹೆಚ್ಚೆಚ್ಚು ಓಡಾಡಲು ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಭೇಟಿ ಕೊಡುತ್ತೇನೆ ಎಂದರು.