ನಾಳೆ ದೇಶಾದ್ಯಂತ ಸುದ್ದಿಗೋಷ್ಠಿ ನಡೆಸಲಿರುವ ಕಾಂಗ್ರೆಸ್.

38
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದು, ಈ ಸಂಬಂಧ ನಾಳೆ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಸುದ್ದಿಗೋಷ್ಠಿ ನಡೆಸಲಿದೆ.

ಮೂಲಗಳ ಪ್ರಕಾರ ನಾಳಿನ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿಗೆ ಜೂನ್ 13 ಹಾಗೂ ಸೋನಿಯಾ ಗಾಂಧಿ ಅವರಿಗೆ ಜೂನ್ 23ರಂದು ಜಾರಿ ನಿರ್ದೇಶನಾಲಯದ ಎದುರು ಹಾಜರಾಗಲು ಸಮನ್ಸ್ ನೀಡಲಾಗಿದೆ.