ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ…

120
firstsuddi

ಮೈಸೂರು : ನಾಳೆ(ಏಪ್ರೀಲ್.10) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್ ಪರೀಕ್ಷೆ)ಯನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ಸಂಯೋಜಕ ಪ್ರೊ.ಹೆಚ್.ರಾಜಶೇಖರ್ ಅವರು ತಿಳಿಸಿದ್ದಾರೆ.

ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ಹಾಗೂ 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಕೆಸೆಟ್ ಪರೀಕ್ಷೆ ಮುಂದೂಡಲಾಗಿದೆ ಎನ್ನಲಾಗಿದೆ.