ನಾಳೆ ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ…

56
firstsuddi

ಮೈಸೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮೈಸೂರು ಮತ್ತು ಚಾಮರಾಜನಗರದಲ್ಲಿ ಪ್ರವಾಸ ಮಾಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿರುವ ಪ್ರಿಯಾಂಕಾ ಮಧ್ಯಾಹ್ನ 12 ರಿಂದ 1 ಗಂಟೆಯೊಳಗೆ ಟಿ.ನರಸೀಪುರದ ಹೆಳವರಹುಂಡಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮಧ್ಯಾಹ್ನ2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಿ, ಮಧ್ಯಾಹ್ನ 3 ಗಂಟೆಯಿಂದ ಚಾಮರಾಜನಗರ ಜಿಲ್ಲೆಯ ಹನೂರಿನ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಮೈಸೂರಿನ ಕೆ.ಆರ್. ನಗರಕ್ಕೆ ಬರಲಿದ್ದಾರೆ ಮತ್ತು ಸಂಜೆ 5.30 ರಿಂದ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಬಿಜೆ ವಿಜಯಕುಮಾರ್ ತಿಳಿಸಿದ್ದಾರೆ.