ನಾಳೆ ಹೊರಬೀಳಲಿದೆ ಹಾನಗಲ್-ಸಿಂದಗಿ ಉಪಚುನಾವಣೆ ಫಲಿತಾಂಶ…

79
firstsuddi

ವಿಜಯಪುರ : ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು, ಚುನಾವಣಾ ಆಯೋಗ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆ.

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಸಿಂದಗಿ ಕ್ಷೇತ್ರದ ಮತ ಎಣಿಕೆ ಕಾರ್ಯ ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಹಾನಗಲ್ ಕ್ಷೇತ್ರದ ಮತ ಎಣಿಕೆ ಕಾರ್ಯ ಹಾವೇರಿ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ಅಕ್ಟೋಬರ್ 30 ರಂದು ಎರಡು ಕ್ಷೇತ್ರದಲ್ಲಿ ಉಪಚುನಾವಣೆ ಮತದಾನ ನಡೆದಿತ್ತು. ಹಾನಗಲ್ ನಲ್ಲಿ ಶೇ.83.72ರಷ್ಟು ಮತ್ತು ಸಿಂದಗಿಯಲ್ಲಿ ಶೇ.69.41ರಷ್ಟು ಮತದಾನವಾಗಿತ್ತು. ಇದೀಗ ನಾಳೆ ಫಲಿತಾಂಶ ಹೊರಬೀಳಲಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಚುನಾವಣಾ ಕಣದಲ್ಲಿದ್ದ ಒಟ್ಟು 19 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ.