ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿ.ಕೆ.ಶಿವಕುಮಾರ್.

31

ಬೆಂಗಳೂರು: ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ, ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಹೀಗಾಗಿ ಇವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ. ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ. ಕೆಲವು ಮಾನದಂಡಗಳ ಆಧಾರದ ಮೇಲೆ ಕೆಲವು ಬಿಪಿಎಲ್ ಕಾರ್ಡು ರದ್ದಾಗಿವೆ ಎಂದರು.