ನಿಂತಿದ್ದ ಬಿಎಂಟಿಸಿ ಬಸ್‍ನಲ್ಲಿ ಆಕಸ್ಮಿಕ ಬೆಂಕಿ – ಮಲಗಿದ್ದಲ್ಲೇ ನಿರ್ವಾಹಕ ಸಜೀವ ದಹನ…

51
firstsuddi

ಬೆಂಗಳೂರು : ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮಲಗಿದ್ದ ನಿರ್ವಾಹಕ ಸಜೀವ ದಹನವಾದ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಲಿಂಗಧೀರನಹಳ್ಳಿ ಡಿ ಗ್ರೂಪ್ ಲೇಔಟ್ ಬಸ್ ನಿಲ್ದಾಣದಲ್ಲಿ ಸುಮನಹಳ್ಳಿ ಡಿಪೋಗೆ ಸೇರಿದ್ದ KA 57 F 2069 ನಂಬರಿನ ಬಿಎಂಟಿಸಿ ಬಸ್ ನಿಲ್ಲಿಸಲಾಗಿತ್ತು. ಬಸ್ ನಲ್ಲಿ ನಿರ್ವಾಹಕ ಮುತ್ತಯ್ಯ ಮತ್ತು ಚಾಲಕ ಪ್ರಕಾಶ್ ಮಲಗಿದ್ದರು. ಮುಂಜಾನೆ 4 ಗಂಟೆ ವೇಳೆಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್‍ಗೆ ಬೆಂಕಿ ಆವರಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಬಸ್ ನೊಳಗಿದ್ದ ಮುತ್ತಯ್ಯ ಬಲಿಯಾಗಿದ್ದಾರೆ. ಅದೃಷ್ಟವಶಾತ್ ಚಾಲಕ ಬೆಳಗ್ಗೆ ಎದ್ದು ನಿತ್ಯ ಕರ್ಮಗಳನ್ನು ಮುಗಿಸಲು ಹೊರ ಹೋದಾಗ ಘಟನೆ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.