ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಓರ್ವ ಸಾವು-ನಾಲ್ವರಿಗೆ ಗಂಭೀರ ಗಾಯ…

246
firstsuddi

ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಅದಗುಂಚಿ ಕ್ರಾಸ್ ಬಳಿ ನಡೆದಿದೆ. ತಮಿಳುನಾಡಿನ ಸೇಲಂ ಮೂಲದ ಅಯ್ಯನಾರ್(35) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ಐದು ಮಂದಿ ಸೇಲಂ ನಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳಿಯರು ಕಾರಿನ ಗಾಜು ಹೊಡೆದು ಗಾಯಗೊಂಡವರನ್ನು ರಕ್ಷಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.