ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ- ಇಬ್ಬರು ಚಾಲಕರು ಸ್ಥಳದಲ್ಲೇ ಸಾವು…

183
firstsuddi

ತುಮಕೂರು : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ ದೊಡ್ಡ ಆಲದಮರದ ಬಳಿ ನಡೆದಿದೆ. ಹಾಳಾಗಿ ರಿಪೇರಿಗಾಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳ್ಳಬೆಳ್ಳಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.