ನಿಖಿಲ್ ಶಾಸಕರಾಗಿ ಆಯ್ಕೆ, ಮನೆಗೆ ಗಂಡು ಮಗುವಿನ ಆಗಮನ : ಭವಿಷ್ಯ ನುಡಿದ ವಿನಯ್ ಗುರೂಜಿ.

98
firstsuddi

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಮನೆಗೆ ಗಂಡು ಮಗುವಿನ ಆಗಮನವಾಗಲಿದೆ ಎಂದು ಅವಧೂತ ವಿನಯ್ ಗುರೂಜಿ ಅವರು ಭವಿಷ್ಯ ನುಡಿದಿದ್ದಾರೆ.

ಇಂದು ಜೆಡಿಎಸ್ ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಮನೆಗೆ ಭೇಟಿ ನೀಡಿದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ವಿನಯ್ ಗುರೂಜಿ ಅವರು ಭವಿಷ್ಯ ನುಡಿದಿದ್ದು, ನಿಖಿಲ್ ಕುಮಾರಸ್ವಾಮಿಗೆ ಉತ್ತಮ ಭವಿಷ್ಯವಿದೆ. ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಶಾಸಕರಾಗುತ್ತಾರೆ. ನಿಖಿಲ್ ಅವರಿಗೆ ಗಂಡು ಮಗುವಿನ ಯೋಗವಿದೆ. ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ವಿನಯ್ ಗುರೂಜಿ ತಿಳಿಸಿದ್ದಾರೆ.

ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ ಅವರು, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದನ್ನು ಸ್ಪಷ್ಟಪಡಿಸಿದ್ದರು. ಅಲ್ಲದೇ ಇದಕ್ಕೂ ಮುನ್ನ ಹೆಚ್.ಡಿ.ಕುಮಾರಸ್ವಾಮಿ ಅವರು ತಾವು ತಾತನಾಗುತ್ತಿರುವ ವಿಚಾರವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು.