ಬಿಹಾರ ಸಿಎಂ ನಿತೀಶ್ ಕುಮಾರ್​ಗೆ ಬಿಗ್ ಶಾಕ್ – ಜೆಡಿಯುನ ಐವರು ಶಾಸಕರು ಬಿಜೆಪಿಗೆ ಸೇರ್ಪಡೆ…

73
firstsuddi

ಇಂಫಾಲ : ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಆರ್ ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದರ ಮಧ್ಯೆ ನಿತೀಶ್ ಕುಮಾರ್ ಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಮಣಿಪುರದಲ್ಲಿ ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಈ ಕುರಿತು ಮಣಿಪುರ ವಿಧಾನಸಭೆಯ ಕಾರ್ಯದರ್ಶಿ ಕೆ.ಮೇಘಜಿತ್ ಸಿಂಗ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದನ್ನು ಸ್ಪೀಕರ್ ಅವರು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್ ಎಂ ಖೌಟೆ ಮತ್ತು ತಂಗಜಮ್ ಅರುಣ್​ಕುಮಾರ್ ಬಿಜೆಪಿ ಸೇರ್ಪಡೆಯಾಗಿರುವ ಶಾಸಕರಾಗಿದ್ದಾರೆ. ಈಶಾನ್ಯ ಭಾಗದಲ್ಲಿ ನಿತೀಶ್ ಕುಮಾರ್ ಅವರ ಪಕ್ಷದಿಂದ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಇದು 2ನೇ ಬಾರಿಯಾಗಿದೆ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ 7 ಜೆಡಿಯು ಶಾಸಕರ ಪೈಕಿ 6 ಮಂದಿ ಬಿಜೆಪಿ ಸೇರಿದ್ದರು.