ನಿತ್ಯ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ: ಡಿಸಿಎಂ ಶಿವಕುಮಾರ್.

57
firstsuddi

ಬೆಂಗಳೂರು: ನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ ಎಂದು ಡಿಸಿಎಂ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನಗಳ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲ ದಿನ ಸಮಯಾವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ಶಾಸಕರ ವಿಶ್ವಾಸ ಗಳಿಸಲು ಹಾಗೂ ಪಕ್ಷದಲ್ಲಿನ ಅಸಮಾಧಾನ ಹಾಗೂ ಸಚಿವರು ಸ್ಪಂದಿಸದೇ ಇರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಈ ನಡೆ ಬಹಳ ಕುತೂಹಲ ಮೂಡಿಸಿದೆ. ನಾಯಕತ್ವ ಗಲಾಟೆ, ಸಿಎಂ ಹುದ್ದೆ ತಿಕ್ಕಾಟ, ಭಿನ್ನಮತದ ಮಧ್ಯೆ ಕೈ ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾಯಾವಕಾಶ ನೀಡುತ್ತಿರುವುದು ಅಚ್ಚರಿ ಮೂಡಿಸಿದೆ.