ಉಡುಪಿ:ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು-ಐವರಿಗೆ ಗಾಯ…

154
firstsuddi

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ಝೂಮ್ ಕಾರೊಂದು ಕಾಪು ಹಳೆ ಮೆಸ್ಕಾಂ ಕಚೇರಿಯ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ಕು ಯುವಕರು ಮತ್ತು ಒರ್ವ ಯುವತಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು ಎಲ್ಲ ಐದು ಮಂದಿಯನ್ನೂ ಕೂಡ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಸಾಗನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.