“ನಿರ್ಭಯಾ” ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಡಿ.16ರಂದು ಗಲ್ಲು ಶಿಕ್ಷೆ…!

256
firstsuddi

ನವದೆಹಲಿ : 2012ರಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ದಿನ ನಿಗದಿಯಾಗಿದ್ದು, ಡಿ.16ರಂದು ಬೆಳಿಗ್ಗೆ 5ಗಂಟೆಗೆ ಆರೋಪಿಗಳನ್ನು ಗಲ್ಲಿಗೇರಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಆರೋಪಿ ವಿನಯ್ ಶರ್ಮಾ ಎಂಬಾತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾಧಾನ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಅತ್ಯಾಚಾರ ಪ್ರಕರಣದಲ್ಲಿ ಬರುವ ಯಾವುದೇ ಕ್ಷಮಾಧಾನ ಅರ್ಜಿಯನ್ನು ಸ್ವೀಕರಿಸುವುದಿಲ್ಲ ಎಂದುರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರೋಪಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿದ್ದು, ಹೀಗಾಗಿ ಡಿ.16 ರಂದು ಬೆಳಗ್ಗೆ 5 ಗಂಟೆಗೆ ತಿಹಾರ್ ಜೈಲಿನಲ್ಲಿ ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಲಾಗುತ್ತಿದ್ದು, ಇದರಿಂದ ನಿರ್ಭಯಾ ಕುಟುಂಬಕ್ಕೆ ನ್ಯಾಯ ದೊರಕಿದಂತಾಗಿದೆ.