ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‍ನಿಂದ ವಜಾ…

272
firstsuddi

ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ. ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿದೆ. ವಿಚಾರಣೆಯ ಹೆಸರಿನಲ್ಲಿ ಕಕ್ಷಿದಾರರಿಗೆ ಜೈಲಿನಲ್ಲಿ ನೀಡಲಾದ ಕಿರುಕುಳದಿಂದ ಮಾನಸಿಕ ಅಸ್ವಸ್ಥನಾಗಿದ್ದಾನೆ. ಹೀಗಾಗಿ ಅವರಿಗೆ ನೀಡಿದ್ದ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಬೇಕು ಎಂದು ವಿನಯ್ ಶರ್ಮಾ ಅವರ ಪರ ವಕೀಲರು ವಾದ ಮಂಡನೆ ಮಾಡಿದ್ದಾರೆ. ವಿನಯ್ ಶರ್ಮಾ ಮಾನಸಿಕ ಅಸ್ವಸ್ಥ ಎಂಬ ವಾದವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಅಲ್ಲದೆ ವಿನಯ್ ಆರೋಗ್ಯವಾಗಿದ್ದಾರೆ ಎಂದು ವೈದ್ಯಕೀಯ ವರದಿಗಳು ತಿಳಿಸುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ.