ಮುಂಬೈ : ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಪುಣೆಯ ಯೆರವಾಡ ಪ್ರದೇಶದಲ್ಲಿ ನಡೆದಿದೆ.
ನಿನ್ನೆ ರಾತ್ರಿ 11ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಾಲ್ವೊಂದಕ್ಕೆ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಸ್ಟೀಲ್ ಕುಸಿದು ದುರಂತ ಸಂಭವಿಸಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು.
ಇದುವರೆಗೆ ಒಟ್ಟು ಆರು ಮಂದಿಯ ದೇಹ ಸಿಕ್ಕಿದ್ದು, ಮೃತದೇಹಗಳನ್ನು ನಗರದ ಸ್ಯಾಸೋನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಯರವಾಡ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.