ಹುಬ್ಬಳ್ಳಿ: ನಿರ್ಮಾಣ ಹಂತದ ಶಾಲಾ ಕಟ್ಟಡದ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ವಿಶೃತ್ ಬೆಳಗಲಿ (9) ಮೃತಪಟ್ಟ ವಿದ್ಯಾರ್ಥಿ. ಏಳನೇ ತರಗತಿ ವಿದ್ಯಾರ್ಥಿ ಪ್ರಭು ನಾಗವಿ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ವಿಕೃತ್ ನಿರ್ಮಾಣ ಹಂತದಲ್ಲಿರುವ ಶಾಲಾ ಕಟ್ಟಡದ ಬಳಿ ಆಟವಾಡುತ್ತಿದ್ದಾಗ ಏಕಾಏಕಿ ಗೋಡೆ ಕುಸಿದು ಬಿದ್ದಿದೆ. ಇದರಿಂದಾಗಿ ಬಾಲಕ ವಿಕೃತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಗೆ ಕಳಪೆ ಕಾಮಗಾರಿ ಕಾರಣ ಎನ್ನಲಾಗುತ್ತಿದೆ.
ಘಟನೆ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










