ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವು, 20 ಮಂದಿಗೆ ಗಾಯ…

50
firstsuddi

ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಜಾರ್ಖಂಡ್ ಮೂಲದ ಮಿನರ್ ಬಿಸ್ವಾಸ್, ಶಾಹೀದ್ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಟ್ಟಡದ ಅವಶೇಷಗಳನ್ನು ಜೆಸಿಬಿಯಿಂದ ಹೊರತೆಗೆಯಲಾಗುತ್ತಿದೆ. ರಾತ್ರಿ ವೇಳೆಗೆ ಕಾಮಗಾರಿಗೆ ವಿದ್ಯುತ್ ಸರಬರಾಜು ಪೂರೈಕೆ ಕಷ್ಟವೆಂದು ಮುಂಜಾನೆಯಿಂದಲೇ ತರಾತುರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದ ಅವಶೇಷಗಳ ಅಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.