ನೀಟ್ ಪರೀಕ್ಷೆಯಲ್ಲಿ ಫೇಲ್ : ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…

54
firstsuddi

ಚೆನ್ನೈ: 2022ನೇ ಸಾಲಿನ ನೀಟ್ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು 19 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರ್ ನ ಇಂದಿರಾ ನಗರದಲ್ಲಿ ನಡೆದಿದೆ.

ಮೃತಳನ್ನು ಲಕ್ಷಣ ಸ್ವೇಧ ಎಂದು ಗುರುತಿಸಲಾಗಿದೆ. ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಯುವತಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಮೃತದೇಹವನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.