ನೀವು ಸುರಕ್ಷಿತವಾಗಿರುವುದೇ ನನಗೆ ಕೊಡುವ ಒಂದು ದೊಡ್ಡ ಉಡುಗೊರೆ-ಅಭಿಮಾನಿಗಳಲ್ಲಿ ಪುನೀತ್ ಮನವಿ…

480
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಮಾರ್ಚ್ 17ರಂದು ತಮ್ಮ 44ನೇ ಹುಟ್ಟುವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಇಡೀ ವಿಶ್ವದಾದ್ಯಂತ ಭೀತಿ ಹೆಚ್ಚಿಸುವ ಮಾರಣಾಂತಿಕ ಕೊರೊನಾ ವೈರಸ್‍ಗೆ ದೇಶದಲ್ಲೇ ಮೊದಲ ಬಲಿ ಕರ್ನಾಟಕದಲ್ಲಿ ಸಂಭವಿಸಿದ ಹಿನ್ನೆಲೆ, ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ವೀಡಿಯೋ ಹರಿಬಿಡುವ ಮೂಲಕ ತಿಳಿಸಿದ್ದಾರೆ. “ಎಲ್ಲಾ ಸಮಸ್ತ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಾನು ಈ ವರ್ಷ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಅಭಿಮಾನಿಗಳು ಯಾರೂ 17ರಂದು ತಮ್ಮ ಊರುಗಳಿಂದ ಮನೆಯ ಹತ್ತಿರ ಬರಬೇಡಿ. ನಾನು ಮನೆಯಲ್ಲೂ ಇರುವುದಿಲ್ಲ. ಏಕೆಂದರೆ ಇಡೀ ದೇಶದಲ್ಲಿ ಕೊರೊನಾ ವೈಋಸ್ ಸಮಸ್ಯೆ ಇದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವೆಲ್ಲರೂ ಸೇರಿ ಕೈ ಜೋಡಿಸಬೇಕು. ಹೀಗಾಗಿ ಬೇರೆ ಬೇರೆ ಊರಿನಿಂದ ಬಂದು ನಿಮ್ಮ ಪ್ರೀತಿ, ವಿಶ್ವಾಸ ತೋರಿಸುತ್ತಿದ್ದಿರಿ. ಖಂಡಿತವಾಗಿಯೂ ನಿಮ್ಮ ಪ್ರೀತಿ ಮತ್ತು ವಿಶ್ವಾಸ ನನ್ನ ಮೇಲೆ ಸದಾ ಇರುತ್ತದೆ ಎಂದು ನಾನು ಭಾವಿಸುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ, ಹುಷಾರಾಗಿರಿ ಎಂದು ತಿಳಿಸಿದ್ದಾರೆ.