ನೂತನ ವಿಜಯನಗರ ಜಿಲ್ಲೆ ಉದ್ಘಾಟನೆಗೆ ಸಿದ್ಧಗೊಂಡ ವೇದಿಕೆ…

73
firstsuddi

ವಿಜಯನಗರ : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲು ವೇದಿಕೆ ಸಿದ್ಧವಾಗಿದೆ.

‘ವಿಜಯನಗರ ಉತ್ಸವ’ ಮತ್ತು ‘ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ’ವು ಇಂದು ಮತ್ತು ನಾಳೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರಣ್ಯ ವೇದಿಕೆ ಸಜ್ಜಾಗಿದ್ದು ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ನೆನಪಿಸುವಂತೆ ವೇದಿಕೆಯನ್ನು ಸಿದ್ಧಗೊಳಿಸಲಾಗಿದೆ. ಎರಡು ದಿನವೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ರಾಜ್ಯ, ಹೊರ ರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.