ನೂತನ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ.

70
firstsuddi

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ತಿನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶ್ರಮಜೀವಿಗಳೊಂದಿಗೆ ಸಂವಾದ ನಡೆಸಿದರು.

ರಾಷ್ಟ್ರೀಯ ಲಾಂಛನವನ್ನು ಕಂಚಿನಿಂದ ತಯಾರಿಸಲಾಗಿದ್ದು, ಇದು ಒಟ್ಟು 9500 ಕೆಜಿ ತೂಕ ಮತ್ತು 6.5 ಮೀ ಎತ್ತರವಿದೆ. ಹೊಸ ಪಾರ್ಲಿಮೆಂಟ್ ಕಟ್ಟಡದ ಸೆಂಟ್ರಲ್ ಫೋಯರ್ ಮೇಲ್ಭಾಗದಲ್ಲಿ ರಾಷ್ಟ್ರೀಯ ಲಾಂಛನವನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ಲಾಂಛನಕ್ಕೆ 6500 ಕೆ.ಜಿ ತೂಕದ ಉಕ್ಕಿನ ರಕ್ಷಣಾ ಕವಚವನ್ನು ನಿರ್ಮಿಸಲಾಗಿದೆ.