ನೂತನ ಸಚಿವರ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದ್ರೆ ಬುಧವಾರ ಸಂಪುಟ ವಿಸ್ತರಣೆ : ಬೊಮ್ಮಾಯಿ.

86
firstsuddi

ನವದೆಹಲಿ : ಸಚಿವ ಸಂಪುಟ ವಿಸ್ತರಣೆ ಸಂಬಂಧ ನಿನ್ನೆ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ನೂತನ ಸಚಿವರ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದ್ರೆ ಬುಧವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಂಭಾವ್ಯ ಸಚಿವರ ಪಟ್ಟಿ ಇಂದು ಅಥವಾ ನಾಳೆಯೊಳಗೆ ಸಿದ್ದವಾಗಲಿದೆ. ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಇಂದು ಸಂಜೆ ಜೆ.ಪಿ.ನಡ್ಡಾ ಅವರ ಭೇಟಿಗಾಗಿ ಸಮಯ ನಿಗದಿಯಾಗಿದೆ. ಈಗಿನ ರಾಜಕೀಯ ಸನ್ನಿವೇಶದಲ್ಲಿ ಎಲ್ಲರನ್ನೂ ಒಟ್ಟು ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಬೇಕಿದೆ ಎಂದರು.

ಎಲ್ಲ ಶಾಸಕರಿಗೂ ಮಂತ್ರಿಯಾಗಲು ಸಾಧ್ಯವಿಲ್ಲ. ಪ್ರಾದೇಶಿಕ ಭಾಗವನ್ನು ಗಮನದಲ್ಲಿಟ್ಟುಕೊಂಡು ರಚನೆ ಮಾಡಲಾವುದು. ಇಂದು ಅಂತಿಮ ಸ್ವರೂಪಕ್ಕೆ ಬರಲಿದೆ. ಎಷ್ಟು ಜನರಿಗೆ ಡಿಸಿಎಂ ಸ್ಥಾನ ಕೊಡಬೇಕು ಎನ್ನುವ ಕುರಿತಂತೆ ಇಂದು ಚರ್ಚೆಯಾಗಲಿದ್ದು ನಂತರವಷ್ಟೆ ಅಂತಿಮವಾಗಲಿದೆ ಎಂದು ಹೇಳಿದರು.