ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ – ವೇದಿಕೆಯಲ್ಲೇ ಕುಸಿದು ಕಲಾವಿದ ಸಾವು…

68
firstsuddi

ಶ್ರೀನಗರ : ಕಲಾವಿದನೋರ್ವ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಿಷ್ನಾಹ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಕಲಾವಿದ ಯೋಗೇಶ್ ಗುಪ್ತಾ(20) ಮಹಿಳೆಯಂತೆ ವೇಷ ಧರಿಸಿ ನೃತ್ಯ ಮಾಡುತ್ತಿದ್ದರು. ಅತ್ಯಂತ ಉತ್ಸಾಹದಿಂದ ಕುಣಿಯುತ್ತಿದ್ದ ಕಲಾವಿದ ಇದ್ದಕ್ಕಿಂದ್ದಂತೆ ಕುಸಿದು ಬಿದ್ದಿದ್ದಾರೆ. ಪ್ರೇಕ್ಷಕರು ಅದು ನೃತ್ಯದ ಒಂದು ಭಾಗವೇ ಆಗಿರಬೇಕು ಎಂದು ಸ್ವಲ್ಪ ಹೊತ್ತಿನವರೆಗೆ ಸುಮ್ಮನೆ ಕುಳಿತು ನೋಡಿದ್ದಾರೆ. ಆದರೆ, ಕೆಳಗೆ ಬಿದ್ದ ಕಲಾವಿದ ಎಷ್ಟು ಹೊತ್ತಾದರೂ ಏಳದಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ಗೊತ್ತಾಗಿದೆ. ತಕ್ಷಣ ಯೋಗೇಶ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಯೋಗೇಶ್ ಗುಪ್ತಾ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.