ನೆರೆ ಪರಿಹಾರ ವಿಚಾರದಲ್ಲಿ ನಾವು ಯಾವುದೇ ಕಾರಣಕ್ಕೂ ತಾರತಮ್ಯ ಮಾಡುವುದಿಲ್ಲ : ಸಿ.ಟಿ. ರವಿ.

271
firstsuddi

ರಾಮನಗರ : ನೆರೆ ಪರಿಹಾರ ವಿಚಾರದಲ್ಲಿ ಯಾವುದೆ ಕಾರಣಕ್ಕೂ ರಾಜಕಾರಣ ಮಾಡಬಾರದು ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ಹಣ ಪ್ರಾಥಮಿಕವಾಗಿ 1ಲಕ್ಷ ರೂ ಹಾಗೂ 10ಸಾವಿರ ರೂ ತಲುಪಿದ್ದು, ಯುಪಿಎ ಸರ್ಕಾರದ ಅವಧಿಯಲ್ಲಿ ಎನ್‍ಡಿಆರ್‍ಎಫ್ ಹಾಗೂ ಎಸ್‍ಟಿಆರ್‍ಎಫ್ ನಿಂದ 4,138 ಕೋಟಿ ರೂ ಬಿಡುಗಡೆ ಮಾಡಲಾಗಿತ್ತು. ಎನ್‍ಡಿಎ ಸರ್ಕಾರದಿಂದ 5ವರ್ಷದಲ್ಲಿ 7200 ಕೋಟಿ ರೂ ಸಿಕ್ಕಿದೆ. ಅದರ ಅಂಕಿ ಅಂಶಗಳು ಬೇಕಾದರೆ ವಿಧಾನಸೌಧದಲ್ಲೂ ಮುಂದಿಡುತ್ತೇವೆ. ಯಾವುದೇ ಕಾರಣಕ್ಕೂ ನೆರೆ ಪರಿಹಾರ ವಿಚಾರದಲ್ಲಿ ನಾವು ತಾರತಮ್ಯ ಮಾಡುವುದಿಲ್ಲ. ಎನ್‍ಡಿಆರ್‍ಎಫ್ ಗೈಡ್‍ಲೈನ್ಸ್ ಪ್ರಕಾರ ಎಷ್ಟು ಹಣವನ್ನು ನೀಡಬೇಕೋ ಅಷ್ಟು ಹಣವನ್ನು ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ನೆರೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಬಾರದು. ರಾಜಕಾರಣ ಮಾಡಲು ಬೇರೆ ಬೇರೆ ವೇದಿಕೆಗಳಿವೆ. ಅಲ್ಲಿ ರಾಜಕಾರಣ ಮಾಡೋಣ. ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಒಂದು ಮನೆಗೆ 96ಸಾವಿರ ರೂ ಕೊಡುತ್ತಿದ್ದರು. ನಾವು 5ಲಕ್ಷ ರೂ ಕೊಡುತ್ತಿದ್ದೇವೆ ಅದು ತಪ್ಪಾ? ಎಂದು ಪ್ರಶ್ನಿಸಿದರು.