ನೇಣು ಬಿಗಿದುಕೊಂಡು ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ…

64
firstsuddi

ಬೆಂಗಳೂರು: ನೇಣು ಬಿಗಿದುಕೊಂಡು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾದ ಘಟನೆ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುದರ್ಶನ್ ಶೆಟ್ಟಿ (45) ಆತ್ಮಹತ್ಯೆಗೆ ಶರಣಾಗಿರುವ ಸಬ್ ಇನ್ಸ್ ಪೆಕ್ಟರ್. ನಿವೃತ್ತ ಯೋಧರಾಗಿದ್ದ ಸುದರ್ಶನ್ ಶೆಟ್ಟಿ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತಿಯಾದ ಕುಡಿತದ ಚಟಕ್ಕೆ ದಾಸರಾಗಿದ್ದ ಸುದರ್ಶನ್ ರಿಹ್ಯಾಬಿಟೇಶನ್ ಸೆಂಟರ್ ಗೆ ತೆರಳಿ ಕುಡಿತವನ್ನ ಬಿಟ್ಟಿದ್ದರು ಎಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.