ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಮೃತದೇಹ ಪತ್ತೆ…

69
firstsuddi

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆ ಬಳಿಯ ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆಯಾಗಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡ ಗೋರಕ್ಷಾ ಪ್ರಮುಖ ರಾಜೇಶ್ ಪೂಜಾರಿ(26)ಯವರ ಮೃತದೇಹ ದೊರೆತಿದೆ.

ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾದ ಹಿನ್ನೆಲೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ, ಮುಳುಗು ತಜ್ಞರ ತಂಡ ಶೋಧ ಕಾರ್ಯ ನಡೆಸಿ ರಾಜೇಶ್ ಪೂಜಾರಿ ಶವ ಹೊರತೆಗೆಯಲಾಗಿದೆ.

ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಅಪಘಾತವೋ, ಆತ್ಮಹತ್ಯೆಯೋ ಅಥವಾ ಯಾರಾದರೂ ಡಿಕ್ಕಿ ಹೊಡೆದು ಅವರನ್ನು ನದಿಗೆ ತಳ್ಳಿ ಪರಾರಿಯಾಗಿದ್ದಾರೋ ಎಂಬುದು ತನಿಖೆ ಬಳಿಕವಷ್ಟೇ ತಿಳಿದುಬರಬೇಕಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.