ನೇತ್ರಾವತಿ ಸೇತುವೆ ಬಳಿ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು…

73
firstsuddi

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ವಾಸಿಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀನ್ (21)ಎಂದು ಗುರುತಿಸಲಾಗಿದೆ.

ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನೇತ್ರಾವತಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಝ್‌ವೀನ್ ದ್ವಿಚಕ್ರ ವಾಹನ ಆ್ಯಕ್ಸಸ್‌ನಲ್ಲಿ ತೆರಳುತ್ತಿದ್ದಾಗ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಮೀನಿನ ವಾಹನವೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಎನ್ನಲಾಗಿದೆ. ಹಾಗಾಗಿ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಮೀನು ಸಾಗಾಟದ ವಾಹನಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಸವಾರ ಅಝ್‌ವೀನ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಸವಾರ ಅಝ್‌ವೀನ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.