ನವದೆಹಲಿ : ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಫೋಟೋ ಜತೆ ಗಣೇಶ, ಲಕ್ಷ್ಮೀ ದೇವರುಗಳ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ಅವರು ಹೇಳಿದ್ದಾರೆ.
ನಾವು ಎಷ್ಟೇ ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ. ಹೀಗಾಗಿ ನಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಮುದ್ರಿಸಿ ಎಂದು ಹೇಳಿದ್ದಾರೆ.










