ಮುಂಬೈ: ಮುಂಬೈ ಕರಾವಳಿ ಪ್ರದೇಶದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದ್ದು, ಅದರಲ್ಲಿದ್ದ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಎಂದಿನಂತೆ ಇಂದು ಬೆಳಗ್ಗೆ ಹೆಲಿಕಾಪ್ಟರ್ ಗಸ್ತು ತಿರುಗುತ್ತಿದ್ದ ವೇಳೆ ಮುಂಬೈ ಪ್ರದೇಶದ ಕರಾವಳಿ ತೀರದಲ್ಲಿ ಅಪಘಾತಕ್ಕೀಡಾಗಿ ತುರ್ತು ಭೂಸ್ಪರ್ಶ ಕಂಡಿದೆ. ತಕ್ಷಣವೇ ಮಾಹಿತಿ ಪಡೆದ ನೌಕಾ ಗಸ್ತು ಪಡೆ ಮೂವರು ಸಿಬ್ಬಂದಿಯನ್ನು ರಕ್ಷಿಸಿದೆ.
ಭಾರತೀಯ ನೌಕಾಪಡೆ ALH ಮುಂಬೈನ ಕರಾವಳಿ ತೀರಕ್ಕೆ ಬರುತ್ತಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೆಲಿಕಾಪ್ಟರ್ ಅಪಘಾತಗೊಂಡಿದೆ. ತಕ್ಷಣ ಪಾರುಗಾಣಿಕಾ ನೌಕಾ ಗಸ್ತು ಕ್ರಾಫ್ಟ್ ಮೂಲಕ ಮೂವರ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ನೌಕಾಪಡೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ.










