ನ್ಯಾಯಾಂಗ ನಿಂದನೆ ಕೇಸ್ : ಕ್ಷಮೆಯಾಚಿಸಿದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ.

22
firstsuddi

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದೆಹಲಿ ಹೈಕೋರ್ಟಿಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ. 

2018ರಲ್ಲಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖ ಅವರಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ, ನ್ಯಾಯಮೂರ್ತಿಗಳಾದ ಎಸ್.ಮುರುಳೀಧರ್ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು.

ಇಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರನ್ನೊಳಗೊಂಡ ಪೀಠದ ಮುಂದೆ ಕ್ಷಮೆಯಾಚನೆ ಸಲ್ಲಿಸಲಾಯಿತು. ನ್ಯಾಯಾಲಯವು 2023 ಮಾರ್ಚ್ 16ರಂದು ಕೋರ್ಟಿಗೆ ಖುದ್ದಾಗಿ ಹಾಜರಿರಬೇಕು ಎಂದು ಆದೇಶಿಸಿದೆ.