ನ್ಯಾಯಾಲಯಕ್ಕೆ ಹಾಜರಾದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು…

140
firstsuddi

ಹುಬ್ಬಳ್ಳಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಹುಬ್ಬಳ್ಳಿ/ 1ನೇ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬೈಕ್ ಬಳಸಲಾಗಿತ್ತು. ಆ ಬೈಕ್ ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.

ಮುಂಬೈ ಜೈಲಿನಿಂದ ಬಾಡಿ ವಾರಂಟ್ ಮೇಲೆ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದರು.