ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಫಾರೂಕ್ ಅಬ್ದುಲ್ಲಾ.

85
firstsuddi

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಂದು ರಾಜೀನಾಮೆ ನೀಡಿದ್ದಾರೆ.

ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಕೆಎನ್ ಸಿ ನಾಯಕ, ನನ್ನ ಆರೋಗ್ಯ ಸರಿಯಾಗಿಲ್ಲ. ಹೀಗಾಗಿ, ಇನ್ನು ಈ ಪಕ್ಷವನ್ನು ಮುನ್ನಡೆಸಲು ನನಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಫಾರೂಕ್ ಪುತ್ರ ಒಮರ್ ಅಬ್ದುಲ್ಲಾ ಪಕ್ಷದ ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮೂಲಗಳು ತಿಳಿಸಿವೆ. ಒಮರ್ ಅಬ್ದುಲ್ಲಾ ಪ್ರಸ್ತುತ ಪಕ್ಷದ ಉಪಾಧ್ಯಕ್ಷರಾಗಿದ್ದಾರೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದೆ.

ಪಕ್ಷದ ಮುಖ್ಯ ವಕ್ತಾರ ತನ್ವಿರ್ ಸಾದಿಕ್ ಅವರು ಮಾತನಾಡಿ, ಚುನಾವಣೆ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ನಾಮಪತ್ರಗಳನ್ನು ಆಹ್ವಾನಿಸಲಾಗುವುದು. ಹಜರತ್ ಬಾಲ್ ನಲ್ಲಿರುವ ಪಕ್ಷದ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯ ಬಳಿ ಡಿಸೆಂಬರ್ 5ರಂದು ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.