ನ್ಯಾಷನಲ್ ಹೆರಾಲ್ಡ್ ಕೇಸ್ : ಜೂನ್ 13ಕ್ಕೆ ಹಾಜರಾಗುವಂತೆ ರಾಹುಲ್‍ಗೆ ಇಡಿ ಸಮನ್ಸ್.

58
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲು ಸಮಯವಕಾಶ ಕೋರಿದ್ದರಿಂದ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಗೆ ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇನ್ನೂ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಜೂನ್ 8ರಂದು ವಿಚಾರಣೆಗೆ ಸೋನಿಯಾ ಗಾಂಧಿ ಹಾಜರಾಗುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ.

2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ದೂರು ದಾಖಲಿಸಿದ್ದರು. 2015ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳ ಹಿಂದೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ನೀಡಿತ್ತು.