ನ್ಯಾಷನಲ್ ಹೆರಾಲ್ಡ್ ಕೇಸ್ ; ರಾಹುಲ್ ಗಾಂಧಿ ವಿಚಾರಣೆ ಮುಂದೂಡಿಕೆ…

68
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಗರಣದ ಕುರಿತು ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಮುಂದೂಡಿದೆ.

ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಜೂನ್ 17ರಿಂದ ಜೂನ್ 20ರವರೆಗೆ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯಕ್ಕೆ ರಾಹುಲ್ ಗಾಂಧಿ ಪತ್ರ ಬರೆದು ಮನವಿ ಮಾಡಿದ್ದರು. ಇದೀಗ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಗೆ ಅನುಮತಿಯನ್ನು ನೀಡಿದ್ದಾರೆ.

51 ವರ್ಷದ ರಾಹುಲ್ ಗಾಂಧಿ ಕಳೆದ ಮೂರು ದಿನಗಳಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಸುಮಾರು 30 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಗುರುವಾರ ಬಿಡುವು ನೀಡಿದ್ದ ಇಡಿ ಶುಕ್ರವಾರ ವಿಚಾರಣೆ ಹಾಜರಾಗಲು ಸಮನ್ಸ್ ನೀಡಿತ್ತು. ಆದರೆ ಈ ನಡುವೆ ಈ ಪತ್ರ ಬರೆದು ವಿನಾಯಿತಿ ಕೋರಿದ್ದರು.