ನ್ಯೂಜಿಲೆಂಡ್​ನಲ್ಲಿ ಭೂಕಂಪನ – 7.1 ತೀವ್ರತೆ ದಾಖಲು…

40
firstsuddi

ವೆಲ್ಲಿಂಗ್ಟನ್ : ನ್ಯೂಜಿಲೆಂಡ್ ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳ ಪ್ರದೇಶದಲ್ಲಿ ಇಂದು ಬೆಳಗ್ಗೆ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ.

ಭೂಕಂಪ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಭಾರೀ ಭೂಕಂಪ ಉಂಟಾದ ತಕ್ಷಣ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ.

ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್ ಒಟ್ಟುಗೂಡುವ ಪ್ರದೇಶದಲ್ಲಿ ಭಾರೀ ಭೂಕಂಪಗಳು ಸಂಭವಿಸುತ್ತದೆ. ಇದು ರಿಂಗ್ ಆಫ್ ಫೈರ್ ಎಂದು ಕರೆಯಲ್ಪಡುವ ತೀವ್ರವಾದ ಭೂಕಂಪನ ಚಟುವಟಿಕೆಯ ವಲಯದ ಅಂಚಿನಲ್ಲಿದೆ. ನ್ಯೂಜಿಲೆಂಡ್ ನಲ್ಲಿ ಪ್ರತಿ ವರ್ಷ ಸಾವಿರಾರು ಭೂಕಂಪಗಳು ಸಂಭವಿಸುತ್ತವೆ.