ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ…

58
firstsuddi

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ.

ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಿಜೋರಾಂ ಈ ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 7 ರಂದು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಛತ್ತೀಸ್‌ಗಢದಲ್ಲಿ ನ.7 ಮತ್ತು ನ.17 ರಂದು ಎರಡು ಹಂತಗಳಲ್ಲಿ ಮತದಾನ ಇರುತ್ತದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನ.17 ರಂದು ಒಂದೇ ಹಂತದಲ್ಲಿ ನಡೆಯಲಿದೆ. ನಂತರ ನ.23 ರಂದು ರಾಜಸ್ಥಾನದಲ್ಲಿ ಮತ್ತು ನ.30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 5ರಂದು ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮಿಜೋರಾಂನಲ್ಲಿ 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರಿದ್ದಾರೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.