ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು.

70
firstsuddi

ಚಂಡೀಗಢ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ ಬೆನ್ನಲ್ಲೇ ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರು ರಾಜೀನಾಮೆ ನೀಡಿದ್ದಾರೆ.

ಟ್ವೀಟ್ ನಲ್ಲಿ ಏನಿದೆ?:
ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆಂದು ಪಕ್ಷದ ಮುಖಂಡ ರಂದೀಪ್ ಸುರ್ಜೇವಾಲ್ ನಿನ್ನೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದರು.

ಪಂಜಾಬ್ ನಲ್ಲಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ವಿರುದ್ಧ ಹೀನಾಯ ಸೋಲು ಕಂಡಿದ್ದು, ಕೇವಲ 18 ಸ್ಥಾನಗಳಲ್ಲಿ ಗೆದ್ದಿದೆ. ಉಳಿದಂತೆ ಉತ್ತರ ಪ್ರದೇಶದಲ್ಲಿ ಕೇವಲ 2 ಸ್ಥಾನ, ಗೋವಾದಲ್ಲಿ 11, ಉತ್ತರಾಖಂಡದಲ್ಲಿ 19, ಮಣಿಪುರದಲ್ಲಿ 5 ಸ್ಥಾನಗಳಲ್ಲಿ ಮಾತ್ರ ಗೆಲುವು ದಾಖಲು ಮಾಡಿದೆ.