ಪಂದ್ಯ ವೇಳೆ ಕ್ರೀಡಾಂಗಣಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ – ನಾಲ್ವರ ಬಂಧನ…

77
firstsuddi

ಬೆಂಗಳೂರು : ಪಿಂಕ್ ಬಾಲ್ ಟೆಸ್ಟ್ ಪಂದ್ಯಾವಳಿ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ ಮ್ಯಾಚ್ ವೇಳೆ ನಾಲ್ವರು ಅಭಿಮಾನಿಗಳು ವಿರಾಟ್ ಕೊಹ್ಲಿ ಅವರನ್ನು ನೋಡಿ ಫುಲ್ ಖುಷ್ ಆಗಿದ್ದರು. ಪಂದ್ಯ ನಡೆಯುತ್ತಿರುವಾಗಲೇ ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು ವಿರಾಟ್ ಕೊಹ್ಲಿ ಬಳಿ ತೆರಳಿ ಸೆಲ್ಫಿಗೆ ಮುಗಿಬಿದ್ದಿದ್ದರು. ಈ ವೇಳೆ ಕೊಹ್ಲಿ ಫೋಟೋಗೆ ಪೋಸ್ ಕೊಟ್ಟಿದ್ದರು. ಕೂಡಲೇ ಎಚ್ಚೆತ್ತುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಅತಿಕ್ರಮ ಪ್ರವೇಶ ಮತ್ತು ನಿಯಮ ಉಲ್ಲಂಘನೆ ಹಿನ್ನೆಲೆ ನಾಲ್ವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಕೆಂದ್ರ ವಿಭಾಗದ ಡಿಸಿಪಿ ಅನುಚೇತ್, ನಿನ್ನೆ ರಾತ್ರಿ ಮ್ಯಾಚ್ ನಡೆಯುತ್ತಿರಬೇಕಾದರೆ ಗ್ರಿಲ್ ಹಾರಿ ನಾಲ್ವರು ಮೈದಾನದ ಒಳಗೆ ಪ್ರವೇಶ ಮಾಡಿದ್ರು. ತಕ್ಷಣ ನಮ್ಮ ಪೊಲೀಸರು, ಅವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಅವರ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೆಸ್ಟ್ ಮಾಡಲಾಗಿದೆ ಎಂದರು.