ವಿಮಾನಕ್ಕೆ ಪಕ್ಷಿ ಡಿಕ್ಕಿ – ತುರ್ತು ಭೂಸ್ಪರ್ಶ…

47
firstsuddi

ವಾಷಿಂಗ್ಟನ್: ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್ಆಫ್ ಆದ ಕೆಲವೇ ಹೊತ್ತಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

ವರದಿಗಳ ಪ್ರಕಾರ ಬೋಯಿಂಗ್ 737 ಫ್ಲೈಟ್ AA1958 ಓಹಿಯೋದ ಕೊಲಂಬಸ್ ನಗರದ ಜಾನ್ ಗ್ಲೆನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಫೀನಿಕ್ಸ್‌ಗೆ ಹೊರಟಿತ್ತು. ಆದರೆ ಟೇಕ್ ಆಫ್ ಆಗುತ್ತಿದ್ದಂತೆ ಪಕ್ಷಿ ಡಿಕ್ಕಿ ಹೊಡೆದ ಪರಿಣಾಮ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆಯೇ ಎಚ್ಚೆತ್ತ ಪೈಲಟ್‌ಗಳು ತಕ್ಷಣವೇ ಕೊಲಂಬಸ್‌ನ ಜಾನ್ ಗ್ಲೆನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಸದ್ಯ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿ ಗಾಯಗೊಂಡಿಲ್ಲ. ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಬಳಿಕ ಎಲ್ಲಾ ಪ್ರಯಾಣಿಕರನ್ನು ಮತ್ತೊಂದು ವಿಮಾನಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಕ್ಕೆ ಹಕ್ಕಿ ಬಡಿದಿರುವ ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.