ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ, ತಕ್ಷಣವೇ ಜಾರಿಗೆ ಬರುವಂತೆ ಪುಟ್ಟಣ್ಣ ಅವರನ್ನು ಉಚ್ಚಾಟಿಸಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದೆ ರಾಮನಗರದಲ್ಲಿ ಮಾತನಾಡಿದ್ದ ಪುಟ್ಟಣ್ಣ ಅವರು, ನಾನು ಜೆಡಿಎಸ್ ಪಕ್ಷವನ್ನು ಬಿಡಲು ನಿರ್ಧರಿಸಿದ್ದೇನೆ. ಆದರೆ ಮುಂದಿನ ನಡೆ ಏನೆಂದೂ ನನಗೆ ಗೊತ್ತಿಲ್ಲ. ಜೆಡಿಎಸ್ ಪಕ್ಷವನ್ನು ಬಿಡಲು ಕಾರಣ ಏನೆಂದು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಎಲ್ಲದಕ್ಕೂ ಸಮಯ ಬಂದೇ ಬರುತ್ತದೆ ಎಂದು ಹೇಳಿದ್ದರು.










